kannada

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ  ಕಡ್ಡಾಯ

webdesk | Tuesday, January 24, 2017 7:01 PM IST

ರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳನ್ನು 7.3.2012ರಲ್ಲಿಯೇ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಇದರಂತೆ ಈ ನಿಯಮಗಳ ಅನ್ವಯ ದಿನಾಂಕ 7.3.2012ರ ನಂತರ ನೇರ ನೇಮಕಾತಿ ಹೊಂದಿದ ಸರ್ಕಾರಿ ನೌಕರರು ಐದು ವರ್ಷಗಳೊಳಗೆ (7.3.2017ರೊಳಗೆ) ಹಾಗೂ ಮುಂದಿನ ವಾರ್ಷಿಕ ವೇತನ ಬಡ್ತಿಗೆ ಆರು ವರ್ಷದ ಅವಧಿಯೊಳಗೆ ಅಂದರೆ (7.3.2018ರವರೆಗೆ)  ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆ ಹೊಂದಲು ಅವಕಾಶ ನೀಡಲಾಗಿದೆ.

ಪರೀಕ್ಷಾ ಪಠ್ಯಕ್ರಮ ಎಂ.ಎಸ್. ವರ್ಡ್, ಎಂ.ಎಸ್. ಎಕ್ಸೆಲ್, ಎಂ.ಎಸ್. ಪವರ್ ಪಾಯಿಂಟ್, ನುಡಿ, ಇ-ಮೇಲ್, ಹಾಗೂ ಕಂಪ್ಯೂಟರ್ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳಿರುತ್ತವೆ. ಪರೀಕ್ಷೆಯು ಇಂಗ್ಲಿಷ್ ಮತ್ತು ಕನ್ನಡಭಾಷೆಯಲ್ಲಿ ನಡೆಸಲಾಗುತ್ತದೆ. ಪ್ರತಿ ಪ್ರಶ್ನೆಗೆ ಒಂದು ಅಂಕವಿದ್ದು, ತಪ್ಪು ಉತ್ತರಕ್ಕೆ ಯಾವುದೇ ಅಂಕವನ್ನು ಕಡಿತ ಮಾಡುವುದಿಲ್ಲ.  ಪರೀಕ್ಷೆ ಮುಗಿದ ಬಳಿಕ ನಿಮಗೆ ಲಭಿಸಿರುವ ಅಂಕದ ವಿವರವು ನಿಮಗೆ ತಕ್ಷಣ ತಿಳಿಯುತ್ತದೆ.