students

6ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆ

Webdesk | Friday, December 29, 2017 2:08 PM IST

6ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆ

ಬಾಗಲಕೋಟೆ,ಡಿ.29: ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 6ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದ್ದು, 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 ಪ್ರವೇಶ ಪರೀಕ್ಷೆಗಳು 2018 ಫೆಬ್ರವರಿ 18 ರಂದು ನಡೆಯಲಿವೆ. ಅರ್ಜಿಗಳನ್ನು ಇಲಾಖೆಯ ಎಲ್ಲ ವಸತಿ ಶಾಲೆ, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು  ಜನವರಿ 13, 2018 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂಸಂ.08354-221821ಗೆ ಸಂಪರ್ಕಿಸಬಹುದು.