ಎಫ್‍ಸಿಐ ವಾಚ್‍ಮನ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಇಂದು ಭೋಪಾಲ್ ನಲ್ಲಿ ತಲ್ಲಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣವಾಗಿದ್ದ ಇಬ್ಬರು ಮಧ್ಯವರ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಧ್ಯಪ್ರದೇಶದ ವಿವಿಧ ಕೇಂದ್ರಗಳಲ್ಲಿ ನಿನ್ನೆ ವಾಚ್‍ಮನ್ ಹುದ್ದೆಗಾಗಿ ಎಫ್‍ಸಿಐ ಪರೀಕ್ಷೆಗಳು ನಡೆಯಬೇಕಿತ್ತು. ಪ್ರಶ್ನೆ ಪತ್ರಿಕೆ ಮತ್ತು ಹುದ್ದೆಗಾಗಿ ಅಕಾಂಕ್ಷಿಗಳಿಂದ ತಲಾ ಐದು ಲಕ್ಷ ರೂ.ಗಳಿಗೆ ಬೇಡಿಕೆ ಇಡಲಾಗಿತ್ತು ಎಂದು ಎಸ್‍ಟಿಎಫ್ ಅಧಿಕಾರಿಗಳು ತಿಳಿಸಿದ್ಧಾರೆ.
ಏಪ್ರಿಲ್ಏ 2. ಸಿಬಿಎಸ್‍ಇ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿ ದೇಶಾದ್ಯಂತ ವಿವಾದ ಸೃಷ್ಟಿಯಾಗಿರುವಾಗಲೇ ಮಧ್ಯಪ್ರದೇಶದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ವಾಚ್‍ಮನ್ (ಕಾವಲುಗಾರ) ಹುದ್ದೆಗಾಗಿ ಭಾರತ ಆಹಾರ ನಿಗಮ(ಎಫ್‍ಸಿಐ)ದ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪದ ಮೇಲೆ ಮಧ್ಯಪ್ರದೇಶದ ವಿಶೇಷ ಕಾರ್ಯಪಡೆ(ಎಸ್‍ಟಿಎಫ್) ಅಧಿಕಾರಿಗಳು ಗ್ವಾಲಿಯಾರ್‍ನ 48 ಅಭ್ಯರ್ಥಿಗಳು ಮತ್ತು ದೆಹಲಿ ಮೂಲದ ಇಬ್ಬರು ಮಧ್ಯವರ್ತಿಗಳನ್ನು ಬಂಧಿಸಿದ್ದಾರೆ.
ಇನ್ನು ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧ ಪಟ್ಟಂತೆ 48 ಮಂದಿಯನ್ನು ಖಚಿತ ಆದರದ ಮೇರೆಗೆ ಬಂಧಿಸಲಾಗಿದೆ.