karnataka

ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ

webdesk | Friday, June 16, 2017 4:29 PM IST

ಬಾಗಲಕೋಟೆ : ಜೂ.16: ಬೀಳಗಿ ಕ್ರಾಸ್ನಷಲ್ಲಿರುವ ಆದರ್ಶ ವಿದ್ಯಾಲಯಕ್ಕೆ ಪ್ರಸಕ್ತ ಸಾಲಿನ 7 ರಿಂದ 10ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಜೂನ್ 24 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, 7ನೇ ತರಗತಿ ಪ್ರವೇಶ ಬಯಸುವ ವಿದ್ಯಾರ್ಥಿಗಳು 2015-16ನೇ ಸಾಲಿನಲ್ಲಿ ಪ್ರವೇಶ ಪರೀಕ್ಷೆ ಬರೆದಿರಬೇಕು. 8ನೇ ತರಗತಿಗೆ 2014-15ನೇ ಸಾಲಿನಲ್ಲಿ, 9ನೇ ತರಗತಿಗೆ 2013-14ನೇ ಹಾಗೂ 10ನೇ ತರಗತಿಗೆ 2012-13ನೇ ಸಾಲಿನಲ್ಲಿ ಕಡ್ಡಾಯವಾಗಿ ಪ್ರವೇಶ ಪರೀಕ್ಷೆಯನ್ನು ಬರೆದಿರಬೇಕು. ಆದರ್ಶ ವಿದ್ಯಾಲಯದ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. 

    ರೋಸ್ಟರ ನಿಯಮಾನುಸಾರ ಖಾಲಿ ಇರುವ ಸೀಟುಗಳನ್ನು ಆಯ್ಕೆಮಾಡಿಕೊಳ್ಳಲಾಗುತ್ತಿದ್ದು, ಜೂನ್ 29 ರಂದು ಬೀಳಗಿ ಕ್ರಾಸ್ನನಲ್ಲಿರುವ ಆದರ್ಶ ವಿದ್ಯಾಲಯದಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರವೇಶ ಪರೀಕ್ಷೆಯನ್ನು ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ ಆದರ್ಶ ವಿದ್ಯಾಲಯದ ಮುಖ್ಯೋಪಾದ್ಯಾಯ (ಮೊನಂ.9986528892) ಸಂಪರ್ಕಿಸುವಂತೆ ಬೀಳಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.